೨ ಪೂರ್ವಕಾಲವೃತ್ತಾಂತ 22:6

ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 22

4ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.

5ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.

6ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.

7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.

8ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.

೨ ಪೂರ್ವಕಾಲವೃತ್ತಾಂತ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी