ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
2ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು
3ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
4ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
5ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ