ಮಲಾಕಿಯ 2:14

ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.

ಸಂದರ್ಭದೊಂದಿಗೆ ಓದಿ · ಮಲಾಕಿಯ 2

12ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.

13ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.

14ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.

15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,

16ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.

ಮಲಾಕಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी