ಆದಿಕಾಂಡ 31:50

ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 31

48ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್‌ ಎಂದೂ

49ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.

50ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.

51ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು.

52ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.

ಆದಿಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी