ಯಾಕೋಬನು 4:10

ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.

ಸಂದರ್ಭದೊಂದಿಗೆ ಓದಿ · ಯಾಕೋಬನು 4

8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.

9ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.

10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.

11ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ

12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?

ಯಾಕೋಬನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी