ಯೆಹೋಶುವ 11:9

ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 11

7ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.

8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.

9ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.

10ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.

11ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.

ಯೆಹೋಶುವ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी