ಹೋಶೇ 4:11

ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.

ಸಂದರ್ಭದೊಂದಿಗೆ ಓದಿ · ಹೋಶೇ 4

9ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.

10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.

11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.

12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.

13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್‌, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.

ಹೋಶೇ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी