೧ ಸಮುವೇಲನು 30:10

ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 30

8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.

9ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.

10ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.

11ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.

12ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.

೧ ಸಮುವೇಲನು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी