ಎಜ್ರನು 5:3

ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.

ಸಂದರ್ಭದೊಂದಿಗೆ ಓದಿ · ಎಜ್ರನು 5

1ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್‌ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.

2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.

3ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.

4ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.

5ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.

ಎಜ್ರನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी