ಯೆಹೆಜ್ಕೇಲನು 34:3

ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 34

1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

2ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?

3ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,

4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

5ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.

ಯೆಹೆಜ್ಕೇಲನು 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी