ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
15ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
19ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ