ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
7ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
8ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ