ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
1ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ