ವಿಮೋಚನಕಾಂಡ 29:32

ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 29

30ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.

31ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.

32ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.

33ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.

34ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.

ವಿಮೋಚನಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी