೨ ಸಮುವೇಲನು 10:15

ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 10

13ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.

14ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.

15ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.

16ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.

17ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.

೨ ಸಮುವೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी