ರೋಮಾಪುರದವರಿಗೆ 8:24

ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.

23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.

24ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?

25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.

26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी