ಅರಣ್ಯಕಾಂಡ 18:5

ಇಸ್ರಾಯೇಲ್‌ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 18

3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.

4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.

5ಇಸ್ರಾಯೇಲ್‌ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.

6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.

7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.

ಅರಣ್ಯಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी