ಧರ್ಮೋಪದೇಶಕಾಂಡ 4:44

ಮೋಶೆಯು ಇಸ್ರಾಯೇಲ್‌ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 4

42ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.

43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್‌, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್‌, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್‌.

44ಮೋಶೆಯು ಇಸ್ರಾಯೇಲ್‌ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--

45ಇಸ್ರಾಯೇಲ್‌ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ

46ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್‌ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.

ಧರ್ಮೋಪದೇಶಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी