ಯೆಶಾಯ 66:17

ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 66

15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.

16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.

17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.

18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.

ಯೆಶಾಯ 66 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी