ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
3ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
4ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
5ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
6ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.
7ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ