ಪ್ರಕಟನೆ 5:13

ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 5

11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.

12ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.

13ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.

14ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.

ಪ್ರಕಟನೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी