ವಿಮೋಚನಕಾಂಡ 22:11

ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 22

9ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.

10ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ

11ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.

12ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.

13ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.

ವಿಮೋಚನಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी