ಲೂಕನು 12:9

ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.

ಸಂದರ್ಭದೊಂದಿಗೆ ಓದಿ · ಲೂಕನು 12

7ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

8ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.

9ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.

10ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.

11ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.

ಲೂಕನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी