೧ ಅರಸುಗಳು 17:21

ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 17

19ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,

20ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.

21ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.

22ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.

23ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.

೧ ಅರಸುಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी