ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
20ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
21ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
23ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ