ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
8ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
10ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
12ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ