೨ ಸಮುವೇಲನು 15:29

ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 15

27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.

28ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.

29ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.

30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.

31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.

೨ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी