ಯೆರೆಮಿಯ 15:4

ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 15

2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.

3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.

4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.

5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?

6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.

ಯೆರೆಮಿಯ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी