೨ ಸಮುವೇಲನು 7:10

ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 7

8ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;

9ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.

10ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.

11ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.

12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.

೨ ಸಮುವೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी