ಧರ್ಮೋಪದೇಶಕಾಂಡ 10:6

ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 10

4ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.

5ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.

6ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.

7ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.

8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.

ಧರ್ಮೋಪದೇಶಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी