ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
1ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
2ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
3ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
4ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ