ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
36ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
37ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
38ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
40ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ