ಇಬ್ರಿಯರಿಗೆ 11:21

ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 11

19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.

20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.

21ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

22ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.

23ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಇಬ್ರಿಯರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी