೧ ಯೋಹಾನನು 2:17

ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 2

15ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.

17ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.

18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.

19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.

೧ ಯೋಹಾನನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी