ಯಾಜಕಕಾಂಡ 23:27

ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

25ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.

26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--

27ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.

28ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.

29ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी