ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
1ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--
2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
3ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.
4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ