ನೀನು ಬಂಗಾರದ ಜವೆಗಳನ್ನು ಮಾಡಬೇಕು.
11ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.
12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
13ನೀನು ಬಂಗಾರದ ಜವೆಗಳನ್ನು ಮಾಡಬೇಕು.
14ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
15ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ