ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
8ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
10ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ