ಯೆಶಾಯ 17:10

ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.

ಸಂದರ್ಭದೊಂದಿಗೆ ಓದಿ · ಯೆಶಾಯ 17

8ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.

9ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.

10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.

11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.

12ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!

ಯೆಶಾಯ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी