ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
16ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
17ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
18ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.
19ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ