ವಿಮೋಚನಕಾಂಡ 7:11

ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 7

9ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.

10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.

11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.

12ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.

13ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.

ವಿಮೋಚನಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी