ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
3ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
5ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ