ಅರಣ್ಯಕಾಂಡ 20:10

ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 20

8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.

9ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.

10ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.

11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.

12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.

ಅರಣ್ಯಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी