ವಿಮೋಚನಕಾಂಡ 20:24

ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 20

22ಕರ್ತನು ಮೋಶೆಗೆ--ನೀನು ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.

23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.

24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

25ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.

26ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.

ವಿಮೋಚನಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी