೧ ಪೂರ್ವಕಾಲವೃತ್ತಾಂತ 22:16

ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 22

14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.

15ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.

16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.

17ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--

18ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.

೧ ಪೂರ್ವಕಾಲವೃತ್ತಾಂತ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी