೨ ಪೂರ್ವಕಾಲವೃತ್ತಾಂತ 34:27

ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

25ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.

26ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--

27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.

28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.

29ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी