ಹೋಶೇ 13:2

ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.

ಸಂದರ್ಭದೊಂದಿಗೆ ಓದಿ · ಹೋಶೇ 13

1ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.

2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.

3ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.

4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.

ಹೋಶೇ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी