೨ ಅರಸುಗಳು 25:21

ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 25

19ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.

20ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.

21ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.

22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.

23ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.

೨ ಅರಸುಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी