ನೆಹೆಮಿಯ 11:3

ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--

ಸಂದರ್ಭದೊಂದಿಗೆ ಓದಿ · ನೆಹೆಮಿಯ 11

1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.

2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.

3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--

4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.

5ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,

ನೆಹೆಮಿಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी