ಯೆರೆಮಿಯ 19:9

ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 19

7ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.

8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.

9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.

10ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,

11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.

ಯೆರೆಮಿಯ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी